Oplus_131072

ಸಕಲೇಶಪುರ: ಪಟ್ಟಣದ ಸರ್ಕಾರಿ ಆಸ್ಪತ್ರೆ ಮುಂಭಾಗದಲ್ಲಿರುವ ಶ್ರೀ ಚೌಡಮ್ಮನವರ ಸನ್ನಿಧಿಯಲ್ಲಿ ನವೆಂಬರ್ 27/11/2026 ಶುಕ್ರವಾರ ಮತ್ತು 29/11/2026 ಭಾನುವಾರ ಕಾರ್ತಿಕ ಪೂಜಾ ಮಹೋತ್ಸವವನ್ನು ಭಕ್ತಿಭಾವದಿಂದ ಆಯೋಜಿಸಲಾಗಿದೆ.ನವೆಂಬರ್ 27ರ ಶುಕ್ರವಾರ ಸಂಜೆ 6ರಿಂದ 8 ಗಂಟೆಯವರೆಗೆ ನದಿಯಿಂದ ನಗರದ ರಾಜಬೀದಿಯಲ್ಲಿ ಮೆರವಣಿಗೆಯ ಮೂಲಕ ಗಂಗೆಯನ್ನು ತರುವ ಕಾರ್ಯಕ್ರಮ ನಡೆಯಲಿದೆ. ನಂತರ ಶ್ರೀ ದೇವಿಯವರಿಗೆ ಪುಷ್ಪಾಲಂಕಾರ ಪೂಜೆ, ಮಹಾಮಂಗಳಾರತಿ ಹಾಗೂ ತೀರ್ಥಪ್ರಸಾದ ವಿನಿಯೋಗ ನೆರವೇರಲಿದೆ.ನವೆಂಬರ್ 29ರ ಭಾನುವಾರ ಬೆಳಿಗ್ಗೆ 6ರಿಂದ 8.30ರವರೆಗೆ ಬಲಿ ಪೂಜೆ ನಡೆಯಲಿದ್ದು, ಮಧ್ಯಾಹ್ನ 1ರಿಂದ ಸಂಜೆ 4 ಗಂಟೆಯವರೆಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿದೆ. ಹರಕೆ ಸಲ್ಲಿಸುವ ಭಕ್ತಾದಿಗಳು ಅಂದು ಬೆಳಿಗ್ಗೆ 8.30ರ ಒಳಗೆ ಹರಕೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.ಈ ಧಾರ್ಮಿಕ ಕಾರ್ಯಕ್ರಮಕ್ಕೆ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ತನು-ಮನ-ಧನ ಸಹಕಾರ ನೀಡುವ ಮೂಲಕ ಶ್ರೀ ಚೌಡೇಶ್ವರಿ ಅಮ್ಮನವರ ಕೃಪೆಗೆ ಪಾತ್ರರಾಗಬೇಕೆಂದು ಮನವಿ ಮಾಡಿದ್ದಾರೆ.

Leave a Reply

Your email address will not be published. Required fields are marked *